Ecclesiastes - Chapter 11
Holy Bible

1 : ನಿನ್ನ ಆಹಾರ ಧಾನ್ಯವನ್ನು ಹೊರ ನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.
2 : ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.
3 : ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದು ಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.
4 : ಗಾಳಿಗಾಗಿಯೇ ಕಾದಿರುವವನು, ಮೋಡಕ್ಕಾಗಿಯೇ ಎದುರು ನೋಡುತ್ತಿರುವವನು ಎಂದಿಗೂ ಬೀಜಬಿತ್ತಲಾರನು; ಎಂದಿಗೂ ಪೈರು ಕೊಯ್ಯಲಾರನು.
5 : ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.
6 : ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.
7 : ಬೆಳಕು ಬಹಳ ಇಂಪು; ಸೂರ್ಯನ ಕಾಂತಿ ಕಣ್ಣುಗಳಿಗೆ ಸೊಂಪು. ಮಾನವನು ಎಷ್ಟೇ ಧೀರ್ಘಕಾಲ ಬದುಕಿರಲಿ ತನ್ನ ಬಾಳಿನ ದಿನಗಳಲ್ಲೆಲ್ಲಾ ಆನಂದಿಸಲಿ; ಆದರೆ ಅಂಧಕಾರದ ದಿನಗಳು ಸಹ ಬಹಳ ಇವೆ ಎಂಬುದನ್ನು ನೆನಪಿಗೆ ತಂದುಕೊಳ್ಳಲಿ. ಆ ಬಳಿಕ ಬರುವುದೆಲ್ಲಾ ನಿರರ್ಥಕ.
8 : ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ.
9 : ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯ ವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.
10 : ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.

Holydivine