Job - Chapter 25
Holy Bible

1 : ಬಳಿಕ ಶೂಹ್ಯನಾದ ಬಿಲ್ದದನು ಹೀಗೆಂದನು:
2 : “ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತ ಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.
3 : ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?
4 : ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧ ನಾಗಿರುವುದು ಶಕ್ಯವೆ?
5 : ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.
6 : ಇಂತಿರಲು ಹುಳುವಿನಂಥ ನರನು ಏತರವನು? ಕ್ರಿಮಿಯಂಥ ನರನು ಎಷ್ಟು ಮಾತ್ರದವನು?”

Holydivine