Leviticus - Chapter 20
Holy Bible

1 : ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಗೆ ಹೇಳಿದರು:
2 : “ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆ ಆಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
3 : ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ.
4 : ಆ ವ್ಯಕ್ತಿ ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದ್ದರೂ ನಾಡಿನವರು ಅವನನ್ನು ಕೊಲ್ಲದೆ ಅವನು ಮಾಡಿದ ಕೃತ್ಯವನ್ನು ನೋಡಿಯೂ ನೋಡದವರಂತೆ ವರ್ತಿಸಿದರೆ
5 : ನಾನು ಆ ವ್ಯಕ್ತಿಗೂ ಅವನ ಕುಟುಂಬದವರಿಗೂ ವಿಮುಖನಾಗುವೆನು; ಅವನನ್ನು ಮಾತ್ರವಲ್ಲ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕ ದೇವತೆಗೆ ಶರಣಾದವರೆಲ್ಲರನ್ನು ತಮ್ಮ ಜನತೆಯಿಂದ ತೆಗೆದುಹಾಕುವೆನು.
6 : “ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.
7 : ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
8 : ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪವಿತ್ರಜನರಾಗುವಂತೆ ಮಾಡುವ ಸರ್ವೇಶ್ವರ.
9 : “ತಂದೆಗಾಗಲಿ, ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆ ತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣ ಶಿಕ್ಷೆಗೆ ಅವರೇ ಕಾರಣ.
10 : “ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು.
11 : ಯಾವನಾದರು ಮಲತಾಯಿಯನ್ನು ಕೂಡಿದರೆ ಅವನು ತಂದೆಗೆ ಮಾನಭಂಗ ಮಾಡಿದಂತಾಯಿತು. ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಆ ಶಿಕ್ಷೆಗೆ ಅವರೇ ಕಾರಣರು.
12 : ಯಾವನಾದರು ಸೊಸೆಯನ್ನು ಸಂಭೋಗಿಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಅವರು ಅಧರ್ಮಕಾರ್ಯವನ್ನು ಮಾಡಿದ್ದರಿಂದ ಆ ಶಿಕ್ಷೆಗೆ ಅವರೇ ಕಾರಣರು.
13 : ಯಾವನಾದರು ಸ್ತ್ರೀಯನ್ನು ಸಂಭೋಗಿಸುವಂತೆ ಪುರುಷನನ್ನು ಸಂಭೋಗಿಸಿದರೆ ಅವರಿಬ್ಬರೂ ಹೇಸಿಗೆಯ ಕೃತ್ಯ ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
14 : ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿ ದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
15 : ಯಾವನಾದರೂ ಪ್ರಾಣಿಸಂಗಮಾಡಿದರೆ ಅವನಿಗೆ ಮರಣಶಿಕ್ಷೆ ಆಗಬೇಕು. ಆ ಪ್ರಾಣಿಯನ್ನು ಕೊಲ್ಲಿಸಬೇಕು.
16 : ಯಾವ ಸ್ತ್ರೀಯಾದರೂ ಪ್ರಾಣಿಯಿಂದ ಸಂಗಮ ಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪ್ರಾಣಿಯನ್ನೂ ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ. ಆ ಮರಣ ಶಿಕ್ಷೆಗೆ ತಾವೇ ಕಾರಣರು.
17 : ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ, ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
18 : ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲು ಪಡಿಸಿದವನು, ಅವಳು ಬಯಲುಪಡಿಸಿ ಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದು ಹಾಕಲ್ಪಡಬೇಕು.
19 : ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಹಾಗೆ ಮಾಡಿದವನು ರಕ್ತ ಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
20 : ಯಾವನಾದರೂ ದೊಡ್ಡಮ್ಮನನ್ನಾಗಲಿ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದು ದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
21 : ಯಾವನಾದರೂ ಅತ್ತಿಗೆ ನಾದಿನಿಯವರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು. ಅವರಿಗೆ ಸಂತಾನವಿರುವುದಿಲ್ಲ.
22 : “ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.
23 : ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡೆಸಿದುದರಿಂದ ನನಗೆ ಹೇಸಿಗೆಯಾದರು.
24 : ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.
25 : “ನೀವು ಶುದ್ಧಾಶುದ್ಧ ಜಂತುಗಳನ್ನು ಪಕ್ಷಿಗಳನ್ನು ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪ್ರಾಣಿಪಕ್ಷಿ, ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು. 26ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ವಿೂಸಲಾಗಿರಬೇಕು.
26 ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.
27 : “ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ, ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.” ಯಾಜಕರು ಪರಿಶುದ್ಧರಾಗಿರಬೇಕು

Holydivine