Nehemiah - Chapter 10
Holy Bible

1 : ಸಹಿಮಾಡಿದವರು ಇವರು: ಹಕಲ್ಯನ ಮಗ ನೆಹೆಮೀಯನೆಂಬ ದೇಶಾಧಿಪತಿ;
2 : ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,
3 : ಪಷ್ಹೂರ್, ಅಮರ್ಯ, ಮಲ್ಕೀಯ,
4 : ಹಟ್ಟೂಷ್, ಶೆಬನ್ಯ,
5 : ಮಲ್ಲೂಕ್, ಹಾರಿಮ್, ಮೆರೇಮೋತ್,
6 : ಓಬದ್ಯ, ದಾನೀಯೇಲ್, ಗಿನ್ನೆತೋನ್,
6 : ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಅರವತ್ತೆಂಟು ಮಂದಿ.
7 : ಬಾರೂಕ್, ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
8 : ಬಾರೂಕ್, ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
9 : ಲೇವಿಯರಲ್ಲಿ ಅಜನ್ಯನ ಮಗ ಯೇಷೂವ, ಹೇನಾದಾದ್ ವಂಶದವನಾದ ಬೆನ್ರ್ನಯ್, ಕದ್ಮೀಯೇಲ್ ಎಂಬವರು;
10 : ಇವರ ಬಂಧುಗಳಾದ ಶೆಬನ್ಯ,
11 : ಹೋದೀಯ, ಕೆಲೀಟ, ಪೆಲಾಯ, ಹಾನಾನ್, ಮೀಕ,
12 : ರೆಹೋಬ್, ಹಷಬ್ಯ ಜಕ್ಕೂರ್, ಶೇರೇಬ್ಯ, ಶೆಬನ್ಯ
13 : ಹೋದೀಯ, ಬಾನೀ, ಬೆನೀನೂ ಎಂಬವರು.
14 : ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್,
15 : ಏಲಾಮ್, ಜತ್ತೂ, ಬಾನೀ, ಬುನ್ನೀ
16 : ಬೇಬೈ, ಅದೋನೀಯ,
17 : ಬಿಗ್ವೈ, ಆದೀನ್, ಆಟೇರ್,
18 : ಹಿಜ್ಕೀಯ, ಅಜ್ಜೂರ್, ಹೋದೀಯ, ಹಾಷುಮ್
19 : ಬೇಚೈ, ಹಾರೀಫ್,
20 : ಅನಾತೋತ್, ನೇಬೈ, ಮಗ್ಪೀಯಾಷ್,
21 : ಮೆಷುಲ್ಲಾಮ್, ಹೇಜೀರ್, ಮೆಷೇಜಬೇಲ್,
22 : ಹನನ್ಯ, ಹಷ್ಷೂಬ್,
24 : ಶೋಬೇಕ್, ರೆಹೂಮ್,
25 : ಶೋಬೇಕ್, ರೆಹೂಮ್,
26 : ಹಷಬ್ನ, ಮಾಸೇಯ, ಅಹೀಯ,
27 : ಹಾನಾನ್, ಆನಾನ್, ಮಲ್ಲೂಕ್, ಹಾರೀಮ್, ಬಾನ ಎಂಬವರು.
28 : ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದು,
29 : ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮ ವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:
30 : ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ; ನಮ್ಮ ಮಕ್ಕಳಿಗೆ ಅವರಿಂದ ಹೆಣ್ಣು ತೆಗೆದುಕೊಳ್ಳುವುದಿಲ್ಲ;
31 : ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;
32 : ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;
33 : ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿ ಸಮಾಧಾನಬಲಿ, ಇಸ್ರಯೇಲರ ದೋಷಪರಿ ಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸ ಕಾರ್ಯಗಳಿಗಾಗಿ ವೆಚ್ಚವಾಗಬೇಕು;
34 : ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತು ಮಾಡುತ್ತೇವೆ;
35 : ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ;
36 : ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪ್ರಾಣಿಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುತ್ತೇವೆ; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಸೇವೆಯಲ್ಲಿ ಇರುವ ಯಾಜಕರಿಗೆ ಕೊಡುತ್ತೇವೆ;
37 : ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;
38 : ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು;
39 : ಇಸ್ರಯೇಲರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗಾಗಿ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು, ಸೇವೆ ನಡೆಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ, ಪವಿತ್ರಾಲಯದ ಪಾತ್ರೆಗಳೂ, ಇರುವ ಕೊಠಡಿಗಳಲ್ಲಿ ಇಡಬೇಕು; ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ,’ ಎಂದು ಬರೆದುಕೊಟ್ಟರು.

Holydivine