Numbers - Chapter 30
Holy Bible

1 : ಮೋಶೆ ಇಸ್ರಯೇಲರ ಕುಲನಾಯಕರಿಗೆ ಹೀಗೆಂದು ಹೇಳಿದನು: ಸರ್ವೇಶ್ವರಸ್ವಾಮಿಯ ಆಜ್ಞೆ ಇದು:
2 : “ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ವಿೂರದೆ ನುಡಿದಂತೆ ನೆರವೇರಿಸಬೇಕು.
3 : “ಕನ್ಯೆಯೊಬ್ಬಳು ತನ್ನ ತಂದೆಯ ಮನೆಯಲ್ಲಿದ್ದು ಸರ್ವೇಶ್ವರನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ
4 : ಅವಳ ತಂದೆ ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು; ಯಾವುದನ್ನು ಮುಟ್ಟುವುದಿಲ್ಲವೆಂದು ಹೇಳಿದ್ದಳೋ ಅದನ್ನು ಮುಟ್ಟಲೇಬಾರದು.
5 : ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
6 : “ಆಕೆ ಮಾಡಿದ ಹರಕೆ ಇಲ್ಲವೆ ಪರ್ಯಾಲೋಚಿಸದೆ ಮಾಡಿದ ಪ್ರತಿಜ್ಞೆ ಮುಗಿಯುವಷ್ಟ ರೊಳಗೆ ಅವಳಿಗೆ ಮದುವೆಯಾಯಿತೆಂದು ಇಟ್ಟುಕೊಳ್ಳೋಣ.
7 : ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು.
8 : ಆದರೆ ಗಂಡನು, ಕೇಳಿದಾಗಲೆ ಬೇಡವೆಂದು ಆಜ್ಞೆ ಮಾಡಿದರೆ ಆ ಹರಕೆ ಇಲ್ಲವೆ ಆ ಅವಿಚಾರ ಪ್ರತಿಜ್ಞೆ ನಿರರ್ಥಕವಾಗುತ್ತವೆ. ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
9 : “ವಿಧವೆ ಇಲ್ಲವೆ ಗಂಡನಿಂದ ಬೇರ್ಪಟ್ಟ ಮಹಿಳೆ ಇಂಥ ಪ್ರಮಾಣವನ್ನು ಕೈಗೊಂಡಿದ್ದರೆ ಅದು ನಿಲ್ಲುತ್ತದೆ. ಅವಳು ಅದನ್ನು ನೆರವೇರಿಸಬೇಕು.
10 : “ಮಡದಿ ಅಂಥ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ
11 : ಅವಳ ಗಂಡ ಅದನ್ನು ತಿಳಿದೂ ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುತ್ತವೆ.
12 : ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುತ್ತವೆ. ಗಂಡನು ರದ್ದುಮಾಡಿದ್ದ ರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
13 : ಹೆಂಡತಿ ಮಾಡಿದ ಹರಕೆಯನ್ನು ಹಾಗು ಉಪವಾಸವಿರುವೆನೆಂದು ಅವಳು ಮಾಡಿದ ಪ್ರಮಾಣವನ್ನು ದೃಢೀಕರಿಸುವುದಕ್ಕಾಗಲಿ, ರದ್ದು ಪಡಿಸುವುದಕ್ಕಾಗಲಿ ಗಂಡನಿಗೆ ಹಕ್ಕಿದೆ.
14 : ಆದರೆ ಅವಳ ಗಂಡ ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೂ ಸುಮ್ಮನಿದ್ದರೆ ಅವಳ ಹರಕೆಗಳನ್ನೂ ಪ್ರತಿಜ್ಞೆಗಳನ್ನೂ ಅವನು ಅನುಮೋದಿಸಿ ದಂತಾಗುವುದು.
15 : ಅನಂತರ ಅವನು ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
16 : ಇವೇ ಗಂಡಹೆಂಡಿರ ವಿಷಯವಾಗಿ ಹಾಗು ಇನ್ನೂ ಮದುವೆಯಿಲ್ಲದ ಪುತ್ರಿ ಮತ್ತು ಅವಳ ತಂದೆಯ ವಿಷಯವಾಗಿ ಸರ್ವೇಶ್ವರಸ್ವಾಮಿ ಕೊಟ್ಟ ನಿಯಮಗಳು.

Holydivine