Psalms - Chapter 125
Holy Bible

1 : ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು / ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು
2 : ಪರ್ವತಗಳಿರುವಂತೆ ಜೆರುಸಲೇಮಿನ ಸುತ್ತಮುತ್ತಲು / ಇಹನು ಪ್ರಭು ಇಂದಿಗೂ ಎಂದಿಗೂ ತನ್ನ ಜನರ ಸುತ್ತಲು
3 : ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ / ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ
4 : ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ / ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ
5 : ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ / ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ //

Holydivine