Psalms - Chapter 13
Holy Bible

1 : ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? / ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? //
2 : ಎನಿತುಕಾಲ ನಾ ಚಿಂತೆಯಿಂದಿರಬೇಕು?/ ದಿನವೆಲ್ಲಾ ಮನದಲ್ಲಿ ನೊಂದಿರಬೇಕು?/ ನನ್ನ ಮೇಲೆ ವೈರಿ ದೊರೆತನ ಮಾಡಬೇಕು?//
3 : ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು / ಮರಣನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು //
4 : ತಾನು ಜಯಗಳಿಸಿದೆನೆಂದು ಶತ್ರು ಹೇಳಿ ಕೊಳ್ಳದಿರಲಿ / ನಾನು ಜಾರಿ ಬಿದ್ದೆನೆಂದು ವೈರಿ ಹಿರಿಹಿಗ್ಗದಿರಲಿ //
5 : ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ / ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ /
6 : ಪ್ರಭು ಮಾಡಿದ ಮಹೋಪಕಾರಗಳಿಗಾಗಿ / ಹಾಡುವೆ ಗೀತವನು ಮನಃಪೂರ್ವಕವಾಗಿ //

Holydivine