Psalms - Chapter 133
Holy Bible

1 : ಸೋದರರು ಒಂದಾಗಿ ಬಾಳ್ವುದು / ಅದೆಷ್ಟು ಚೆನ್ನ, ಅದೆಷ್ಟು ರಮ್ಯ
2 : ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ / ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ
3 : ರಮ್ಯ, ಹೆರ್ಮೊನ್ ಪರ್ವತದ ಮೇಲೆ ಬೀಳುವ ಮಂಜಿನಂತೆ / ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ // ಆಶೀರ್ವಾದವು, ಅಮರ ಜೀವವು / ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು //

Holydivine