Psalms - Chapter 14
Holy Bible

1 : “ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು / ಹೇಯ ಕೃತ್ಯವೆಸಗುವರು ಆ ಭ್ರಷ್ಟಾಚಾರಿಗಳು / ಒಳಿತನ್ನು ಮಾಡುವರಾರೂ ಇಲ್ಲ ಅವರೊಳು //
2 : ಮಾನವರನು ಪ್ರಭು ಸ್ವರ್ಗದಿಂದ ಸವಿೂಕ್ಷಿಸುತಿಹನು / ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು /
3 : ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ / ಒಳಿತನ್ನು ಮಾಡುವವನಿಲ್ಲ; ಒರ್ವನೂ ಇಲ್ಲ //
4 : ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ ?/ ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ?/
5 : ಸಜ್ಜನರ ಸಂಗದೊಳು ದೇವನಿರಲು / ದುರ್ಜನರಿದೋ ದಿಗ್ಭ್ರಾಂತರಾಗುವರು //
6 : ಕೆಡಿಸಬಹುದವರು ಬಡಜನರ ಯೋಜನೆಯನು / ಪ್ರಭುವಾದರೊ ಅವರಿಗೆ ಆಶ್ರಯವಾಗಿರುವನು //
7 : ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ / ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ / ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ //

Holydivine