Psalms - Chapter 140
Holy Bible

1 : ಬಿಡಿಸೆನ್ನನು ಪ್ರಭು ಕೆಡುಕರಿಂದ / ಕಾಪಾಡೆನ್ನನು ಹಿಂಸಕರಿಂದ
2 : ಕೇಡನು ಕಲ್ಪಿಸುತ್ತಾರವರು ಮನದೊಳು / ಕಲಹವೆಬ್ಬಿಸುತ್ತಾರೆ ಯಾವಾಗಲೂ
3 : ಅವರ ನಾಲಗೆಯು ಸರ್ಪದಂತೆ / ಹಾವಿನ ವಿಷ ಅವರ ತುಟಿ ಹಿಂದೆ
4 : ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ / ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ / ನಾನೆಡವುದನೇ ನಿರೀಕ್ಷಿಸುವವರಿಂದ
5 : ಒಡ್ಡಿದರು ಗರ್ವಿಗಳು ಗುಪ್ತವಾಗಿ / ಉರುಲನು, ಪಾಶಗಳನು ನನಗಾಗಿ / ಬಲೆಹಾಸಿದರು ದಾರಿಗೆ ಅಡ್ಡವಾಗಿ
6 : “ನೀನೆ ನನ್ನ ದೇವರು” ಎಂದೆ ಪ್ರಭುವಿಗೆ / ಕಿವಿಗೊಡೆಂದು ಕೇಳಿದೆ, ನನ್ನ ವಿಜ್ಞಾಪನೆಗೆ
7 : ಸ್ವಾಮಿದೇವಾ, ನೀನೆನಗೆ ದುರ್ಗಸ್ಥಾನ / ರಣರಂಗದಲಿ ನೀನೆನಗೆ ಶಿರಸ್ತ್ರಾಣ
8 : ನೆರವೇರಿಸಬೇಡ ದುರುಳರ ಕೋರಿಕೆಯನು / ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು
9 : ನನ್ನನ್ನು ಸುತ್ತುವರೆದಿರುವವರು ತಲೆಯೆತ್ತದಿರಲಿ / ಅವರಾಡುವ ಕೇಡು ಅವರ ತಲೆಯಮೇಲೇ ಎರಗಲಿ
10 : ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ / ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ
11 : ಉಳಿಯದಿರಲಿ ನಾಡೊಳು ಚಾಡಿಕೋರರು | ಕೇಡಿಂದ ನಾಶವಾಗಲಿ ಹಿಂಸಕರು ||
12 : ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ / ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ?
13 : ಭಜಿಸುವರು ಸಜ್ಜನರು ನಿನ್ನಾಸಿರಿನಾಮವನು / ಬಾಳ್ವರು ಸುಮನಸ್ಕರು ಬಿಡದೆ ನಿನ್ನ ಸನ್ನಿಧಿಯನು //

Holydivine