Psalms - Chapter 17
Holy Bible

1 : ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ / ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ //
2 : ನ್ಯಾಯ ತೀರ್ಪು ಬರಲಿ ಎನಗೆ, ನಿನ್ನಿಂದಲೆ | ನೀತಿಗನುಸಾರ ನೋಡುವಾತ, ನೀನಲ್ಲವೆ?||
3 : ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು / ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು //
4 : ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ / ನಿನ್ನಧರ ವಚನವನು ನಾನೆಂದಿಗು ವಿೂರಿ ನಡೆದಿಲ್ಲ //
5 : ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ / ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ //
6 : ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ / ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ //
7 : ಶರಣರನು ಶತ್ರುವಿನಿಂದ ಸಂರಕ್ಷಿಸುವಾತ ನೀನಯ್ಯಾ / ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ / ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ //
8 : ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ / ಸುತ್ತುವರೆದಿರುವ ಪ್ರಾಣ ವೈರಿಗಳಿಂದ /
9 : ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು / ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು //
10 : ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ / ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ //
11 : ಹಿಂದೆಯೆ ಬಂದು ಸುತ್ತುವರೆದುಕೊಳ್ಳುವರು / ನೆಲಕಪ್ಪಳಿಸಲು ಹೊಂಚು ಕಾಯುತ್ತಿರುವರು //
12 : ಇಹರು ಸೀಳಿಹಾಕಲಿರುವ ಕೇಸರಿಯಂತೆ / ಹೊಂಚು ಹಾಕುತಿಹರು ಪ್ರಾಯ ಸಿಂಹದಂತೆ //
13 : ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು / ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು //
14 : ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು / ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು // ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ / ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ //
15 : ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು / ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು //

Holydivine