Psalms - Chapter 4
Holy Bible

1 : ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ / ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ /
2 : ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? / ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? //
3 : ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ / ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ //
4 : ಕೋಪಗೊಂಡರೂ ದೂರವಿರು ಪಾಪದಿಂದ / ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ //
5 : ಅರ್ಪಿಸಿರಿ ಯೋಗ್ಯ ಬಲಿಗಳನೆ / ಇಡಿರಿ ಭರವಸೆ ಪ್ರಭುವಿನಲೆ //
6 : “ಒಳಿತು ಮಾಳ್ಪರೆಲ್ಲಿ !” ಎಂದು ಕೇಳುತಿಹರು ಜನತೆ / ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ //
7 : ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು / ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು //
8 : ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ / ಪ್ರಭು ನೀ ಕಾಯುವೆ ಎನ್ನ ಸುರಕ್ಷಿತವಾಗಿ //

Holydivine