Psalms - Chapter 43
Holy Bible

1 : ನಿರ್ಣಯಿಸು ನನ್ನ ನ್ಯಾಯವನು ಓ ದೇವಾ / ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ / ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ //
2 : ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ?/ ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ?//
3 : ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕೆ / ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ //
4 : ಬರುವೆನಾಗ ನಿನ್ನ ಬಲಿಪೀಠದ ಬಳಿಗೆ / ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ / ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ //
5 : ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ / ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ //

Holydivine