Psalms - Chapter 48
Holy Bible

1 : ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ / ದೇವನಗರದಲಿ ಆತನ ಪವಿತ್ರ ಪರ್ವತ //
2 : ಪರಾತ್ಪರನಾದ ಪ್ರಭುವು ಘನಗಂಭೀರನು | ಪ್ರಪಂಚಕ್ಕೆಲ್ಲ ರಾಜಾಧಿರಾಜನು ||
3 : ಜನಾಂಗಗಳನಾತ ನಮಗಧೀನಪಡಿಸಿಹನು | ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು ||
4 : ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ | ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ ||
5 : ಏರಿದನು ಪ್ರಭು ಜಯಜಯಕಾರದೊಂದಿಗೆ | ಆರೋಹಣವಾದನು ತುತೂರಿನಾದ ಜೊತೆಗೆ ||
6 : ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ | ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ ||
7 : ದೇವನು ಭೂಮಂಡಲಕ್ಕೆಲ್ಲಾ ಒಡೆಯನು | ಕೀರ್ತನೆಯಿಂದ ಕೊಂಡಾಡಿರಿ ಆತನನು ||
8 : ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು / ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು //
9 : ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು / ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು //
10 : ನಿನ್ನ ನಾಮದಂತೆ ನಿನ್ನಾ ಹೊಗಳಿಕೆ / ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ / ದೇವಾ, ನೀತಿಭರಿತ ನಿನ್ನ ಆಳ್ವಿಕೆ //
11 : ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ / ಯೆಹೂದ್ಯ ನಗರಗಳು ಆನಂದಪಡಲಿ / ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ //
12 : ಸಂಚಾರಮಾಡಿರಿ ಸಿಯೋನ್ ನಗರದೊಳು / ಮಾಡಿರಿ ಪ್ರದಕ್ಷಿಣೆ ಅದರ ಸುತ್ತಲು / ಲೆಕ್ಕವಿಲ್ಲದಿವೆ ನೋಡಿ ಗೋಪುರಗಳು //
13 : ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು / ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು //
14 : ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು / ನಮಗೀತ ಮಾರ್ಗದರ್ಶಕ ತಲತಲಾಂತರಕು” /

Holydivine