Psalms - Chapter 56
Holy Bible

1 : ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು // ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು //
2 : ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು / ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು //
3 : ಹೆದರಿಕೆ ಉಂಟಾದಾಗ / ನೀನೆ ನನಗೆ ಆಶ್ರಯ //
4 : ದೇವರಲ್ಲೇ ನಿರ್ಭೀತ ನಂಬಿಕೆ ನನಗೆ / ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ / ನರಮಾನವರು ಏನು ಮಾಡಿಯಾರೆನಗೆ?//
5 : ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ / ಅವರು ಬಗೆವುದೆಲ್ಲಾ ಕೇಡೇ ನನಗೆ //
6 : ಒಟ್ಟುಗೂಡಿ ಹೊಂಚುಹಾಕುತಿಹರು / ಹೆಜ್ಜೆಹಿಡಿದು ಕೊಲ್ಲ ಬರುತಿಹರು //
7 : ಇಂಥಾ ದ್ರೋಹಿಗಳು ತಪ್ಪಿಸಿಕೊಳ್ಳಬಾರದಯ್ಯಾ // ರೌದ್ರದಿಂದಾ ಜನರನು ನೀ ಕೆಡವಿಬಿಡು ದೇವಾ //
8 : ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ / ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ / ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ?//
9 : ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ / ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ //
10 : ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ / ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ //
11 : ದೇವರಲ್ಲೇ ನಿರ್ಭೀತ ನಂಬಿಕೆ ನನಗೆ / ನರಮಾನವರು ಏನು ಮಾಡಿಯಾರೆನಗೆ //
12 : ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ / ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ / ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ //
13 : ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ / ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ //

Holydivine