Psalms - Chapter 82
Holy Bible

1 : ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು | ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು ||
2 : “ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? / ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು?//
3 : ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು / ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು //
4 : ಬಿಡುಗಡೆಮಾಡಿರಿ ದೀನ ಬಡಬಗ್ಗರನು / ದುರುಳರ ಕೈಯಿಂದ ರಕ್ಷಿಸಿರಿ ಅವರನು //
5 : ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು / ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು //
6 : ‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ /
7 : ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” //
8 : ಎದ್ದೇಳು ದೇವ, ಸ್ಥಾಪಿಸು ನ್ಯಾಯವನು ಧರೆಯೊಳು / ನಿನ್ನ ಸೊತ್ತಾಗಿವೆಯಲ್ಲವೆ ಸಮಸ್ತ ರಾಷ್ಟ್ರಗಳು //

Holydivine