Psalms - Chapter 95
Holy Bible

1 : ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ / ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ //
2 : ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ / ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ //
3 : ಏಕೆಂದರೆ ಪ್ರಭು ದೇವಾಧಿದೇವನು | ದೇವರುಗಳಲೆಲ್ಲ ರಾಜಾಧಿರಾಜನು ||
4 : ಆತನ ಕೈಯಲ್ಲಿವೆ ಬುವಿಯಂತರಾಳಗಳು | ಆತನವೇ ಪರ್ವತಗಳಾ ತುತ್ತತುದಿಗಳು ||
5 : ಸಮುದ್ರವು ಆತನದೆ-ಅದ ನಿರ್ಮಿಸಿದವ ಆತನೆ | ಒಣನೆಲವು ಆತನದೆ-ಅದ ರೂಪಿಸಿದವ ಆತನೆ ||
6 : ಬನ್ನಿ, ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ | ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ ||
7 : ಆತನೆಮ್ಮ ದೇವರು, ನಾವು ಆತನ ಕೈಮಂದೆ | ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ ||
8 : ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ | ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ | ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ ||
9 : ನೋಡಿದರಾದರೂ ನನ್ನ ಮಹತ್ಕಾರ್ಯಗಳನು | ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು ||
10 : ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ | ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ ||
11 : ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ | ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ ||

Holydivine